ಕಲಬುರಗಿ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅತಿಯಾದ ಮಳೆಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಹಾನಿಯಾದ ಹೆಸರು ಬೆಳೆಯನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ವೀಕ್ಷಣೆ ಮಾಡಿದರು.
ಸತತವಾಗಿ ಸುರಿದ ಮಳೆಯಿಂದ ಬೆಳೆ ನಷ್ಟದಲ್ಲಿ ಪ್ರಮುಖ ಹೊಲಗಳಿಗೆ ತೆರಳಿದ ಸಚಿವ ಶರಣಪ್ರಕಾಶ ಪಾಟೀಲ ಹೆಸರು ಹಾಗೂ ತೊಗರಿ ಬೆಳೆಗಳನ್ನು ಪರಿಶೀಲನೆ ನಡೆಸಿದರು.
ಸೇಡಂ ತಾಲೂಕಿನ ಕಲಕಂಭ ಹಾಗೂ ಅಳ್ಳೊಳ್ಳಿ ಗ್ರಾಮಗಳ ಹೊಲಗಳಿಗೆ ತೆರಳಿ ರೈತರ ಅಭಿಪ್ರಾಯಗಳನ್ನು ಆಲಿಸಿದರು. ಜೊತೆಯಲ್ಲಿದ್ದ ಕೃಷಿ ಅಧಿಕಾರಿಗಳಿಗೆ ಬೆಳೆ ಹಾನಿ ಬಗ್ಗೆ ಪ್ರಾಥಮಿಕ ವರದಿಯನ್ನು ನೀಡುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಕೃಷಿಕ ಸಮಾಜ ಅಧ್ಯಕ್ಷ ಬಸವರಾಜ ರೇವಗೊಂಡ, ಕೃಷಿಕ ಸಮಾಜದ ರಾಜ್ಯ ಸದಸ್ಯ ಬಸವರಾಜ ಪಾಟೀಲ ಊಡಗಿ ಸೇರಿದಂತೆ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa