ಗದಗ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಕ್ಟೋಬರ್ 07 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಸೆಪ್ಟೆಂಬರ್ 03 ರಂದು ಮುಂಜಾನೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಅಡಿಟೋರಿಯಮ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.
ಪೂರ್ವಭಾವಿ ಸಭೆಗೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಶ್ರೀ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಪರಿಶಿಷ್ಟ ವರ್ಗ ಪರಿಶಿಷ್ಟ ಜಾತಿ ಹಿಂದುಳಿದ ವರ್ಗ ಗಣ್ಯ ವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಆಗಮಿಸಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಸಲಹೆ ಮತ್ತು ಸೂಚನೆಗಳನ್ನು ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP