ಧರ್ಮಸ್ಥಳ, 31 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಪುಣ್ಯಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳನ್ನು ಬಿಜೆಪಿ ಸಹಿಸಲು ಸಿದ್ಧವಿಲ್ಲ ಎಂಬ ಸಂದೇಶವನ್ನು ನಾಳೆ ನಡೆಯುವ ‘ಧರ್ಮಸ್ಥಳ ಚಲೋ’ ಮತ್ತು ಧರ್ಮಜಾಗೃತಿ ಸಮಾವೇಶದಲ್ಲಿ ನೀಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಇಂದು ಧರ್ಮಸ್ಥಳದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ, ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಖಂಡಿಸಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣದಲ್ಲಿ ಎಡಪಂಥೀಯರು, ನಗರ ನಕ್ಸಲರು, ಪಿಎಫ್‌ಐ-ಎಸ್‌ಡಿಪಿಐ ಸೇರಿದಂತೆ ಅಂತರಾಷ್ಟ್ರೀಯ ಏಜೆಂಟ್‌ಗಳ ಕೈವಾಡವಿದೆ ಎಂದು ಶಂಕೆ ವ್ಯಕ್ತವಾಗಿದೆ.
ಎಸ್‌ಐಟಿ ತನಿಖೆಯ ದಿಕ್ಕು ಸರಿಯಿಲ್ಲ, ಅನಾಮಿಕ ವ್ಯಕ್ತಿಯ ಹೇಳಿಕೆ, ಸಾಕ್ಷ್ಯಾಧಾರಗಳ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದರು.
ಸಮಾವೇಶದಲ್ಲಿ ಕೇಂದ್ರ ಸಚಿವರು ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪಕ್ಷದ ರಾಜ್ಯ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಸಂಸದರು, ಶಾಸಕರು, ಪ್ರಮುಖ ನಾಯಕರು ಹಾಗೂ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa