ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ನಾನಾ ಕಡೆ ಗಣೇಶ ಚತುರ್ಥಿ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1ರಿಂದ ರಾತ್ರಿ 10ರವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ. ಬಿವಿಕೆ ಅಯ್ಯಂಗಾರ್ ರಸ್ತೆ, ಚಿಕ್ಕಪೇಟೆ, ಸುಲ್ತಾನಪೇಟೆ, ಅಕ್ಕಿಪೇಟೆ, ಓಟಿಸಿ ರಸ್ತೆ, ಬ
ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ


ಬೆಂಗಳೂರು, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ನಾನಾ ಕಡೆ ಗಣೇಶ ಚತುರ್ಥಿ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1ರಿಂದ ರಾತ್ರಿ 10ರವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ.

ಬಿವಿಕೆ ಅಯ್ಯಂಗಾರ್ ರಸ್ತೆ, ಚಿಕ್ಕಪೇಟೆ, ಸುಲ್ತಾನಪೇಟೆ, ಅಕ್ಕಿಪೇಟೆ, ಓಟಿಸಿ ರಸ್ತೆ, ಬಳೇಪೇಟೆ, ಆರ್.ಟಿ ಸ್ಟ್ರೀಟ್, ಅವೆನ್ಯೂ ರಸ್ತೆ ಸೇರಿದಂತೆ ಹಲವು ರಸ್ತೆಗಳ ಸಂಚಾರಕ್ಕೆ ತಾತ್ಕಾಲಿಕ ಅಡ್ಡಿಯಿದ್ದು, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ವಾಹನ ಸವಾರರು ಮೈಸೂರು ಬ್ಯಾಂಕ್ ವೃತ್ತ–ಕೆ.ಜಿ ರಸ್ತೆ, ಟೌನ್ ಹಾಲ್–ಕೆ.ಜಿ ರಸ್ತೆ, ಕಾಟನ್ ಪೇಟೆ–ಮೈಸೂರು ರಸ್ತೆ ಮಾರ್ಗಗಳನ್ನು ಬಳಸಬಹುದು ಎಂದು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande