ಇಂಗ್ಲೀಷ ವಿಷಯ ಬೋಧನೆಗಾಗಿ ಅರ್ಜಿ ಆಹ್ವಾನ
ಧಾರವಾಡ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕರ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಇಂಗ್ಲೀಷ್ ವಿಷಯ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವ
ಇಂಗ್ಲೀಷ ವಿಷಯ ಬೋಧನೆಗಾಗಿ ಅರ್ಜಿ ಆಹ್ವಾನ


ಧಾರವಾಡ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕರ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಇಂಗ್ಲೀಷ್ ವಿಷಯ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪುರುಷ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8495921888 ಗೆ ಸಂಪರ್ಕಿಸಬಹುದು ಎಂದು ಹುಬ್ಬಳಿ ಬಾಲಕರ ಸರ್ಕಾರಿ ಬಾಲಮಂದಿರದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande