ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ರಾಯಚೂರು, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಅಭಿವೃದ
ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ


ರಾಯಚೂರು, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ರಾಯಚೂರು ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ದುಗನೂರು ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮೈಲಾರಲಿಂಗೇಶ್ವರ ಗುಡಿ, ಶ್ರೀ ಕಡಬೂರು ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ ಕಾಮಗಾರಿಗಳಿಗೂ ಸಹ ಇದೆ ವೇಳೆ ಶಾಸಕರು ಚಾಲನೆ ನೀಡಿದರು.

ಬಿಚ್ಚಾಲಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಡಿಯಲ್ಲಿ ಚರ್ಚ್ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಗಿಲ್ಲೇಸೂಗುರ ಗ್ರಾಮಕ್ಕೆ ತೆರಳಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಡಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಜೊತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ ಶ್ರೀ ಮಾರೆಮ್ಮ ಗುಡಿ, ಶ್ರೀ ಗುಡಿಕಲ್ ಅಲ್ಲಿಪೀರ್ ಮಂದಿರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಅದೇ ರೀತಿ ಕೆಕೆಆರ್ಡಿಬಿಯ ಮ್ಯಾಕ್ರೋ ಯೋಜನೆಯಡಿ ಶ್ರೀ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಯ 4 ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ದೇವಸೂಗುರ ಬ್ಲಾಕ್ ಅಧ್ಯಕ್ಷರು, ದುಗನೂರು, ಬಿಚ್ಚಾಲಿ, ಗಿಲ್ಲೇಸೂಗುರ ಗ್ರಾಮಗಳ ಹಿರಿಯ ಮುಖಂಡರು, ಸುತ್ತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೆಶನ ಸದಸ್ಯರು, ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande