ಸಿಪೆಟ್ ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ
ಬಳ್ಳಾರಿ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 1
ಸಿಪೆಟ್ ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ


ಬಳ್ಳಾರಿ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸಲಾಗಿದೆ.

*ಕೋರ್ಸ್:*

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ – 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ– 3 ವರ್ಷ ಕೋರ್ಸ್.

ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಮಾಹಿತಿಗಾಗಿ ಆನ್‍ಲೈನ್ ವೆಬ್‍ಸೈಟ್ www.cipet.gov.in ಅಥವಾ ದೂ.0821-2510618, ಮೊ.9480253024, 9791431827 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಧಾನ ನಿರ್ದೇಶಕ ಹಾಗೂ ಮುಖ್ಯಸ್ಥರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande