ನುಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಆಗಸ್ಟ್ 09ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16ರಂದು ಶ್ರೀಕೃಷ್ಣ ಜನ್ಮ ದಿನದ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ತಿಳಿಸ
ನುಲಿಯ ಚಂದಯ್ಯ ಹಾಗೂ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ


ವಿಜಯಪುರ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಆಗಸ್ಟ್ 09ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16ರಂದು ಶ್ರೀಕೃಷ್ಣ ಜನ್ಮ ದಿನದ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ತಿಳಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಾಗೂ ಆಗಸ್ಟ್ 16ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.

ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಲಾ ತಂಡಗಳೊಂದಿಗೆ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ, ಬೆಳಿಗ್ಗೆ 10:30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದ್ದು, ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande