ವಿಕಲಚೇತನರ ಸಲೀಕರಣ ಇಲಾಖೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ
ಬಳ್ಳಾರಿ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿ
ವಿಕಲಚೇತನರ ಸಲೀಕರಣ ಇಲಾಖೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ


ಬಳ್ಳಾರಿ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಬೇಕಾದ ದಾಖಲೆ:

ಕ್ರೂಢೀಕೃತ ಹಾರ್ಡ್ ಮತ್ತು ಸಾಫ್ಟ್ ಪ್ರತಿ ಹಾಗೂ ವಿಕಲಚೇತನರ ಗುರುತಿನ ಚೀಟಿ ಪ್ರತಿ (ಯುಡಿಐಡಿ ಕಾರ್ಡ್). ಅರ್ಜಿ ನಮೂನೆಯಲ್ಲಿ ಅರ್ಜಿದಾರರು ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮಸಂಖ್ಯೆಯೊಂದಿಗೆ ಇತರೆ ದಾಖಲೆಗಳ ಜೊತೆ ಅರ್ಜಿ ಭರ್ತಿ ಮಾಡಿ ಜಿಲ್ಲಾ ಅಂಗವಿಕಲರ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯ ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್‍ಸೈಟ್ www.welfareofdisabled.kar.nic.in CxÀªÁ www.dwdsc.kar.nic.in ನಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‍ಮೆಂಟ್ ನ ಶಾಂತಿಧಾಮ ಆವರಣದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande