ವಿಶ್ವ ವಿಕಲಚೇತನರ ದಿನಾಚರಣೆ : ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಯಚೂರು, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿ
ವಿಶ್ವ ವಿಕಲಚೇತನರ ದಿನಾಚರಣೆ : ಪ್ರಶಸ್ತಿಗೆ ಅರ್ಜಿ ಆಹ್ವಾನ


ರಾಯಚೂರು, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆ-2025ರ ಅಂಗವಾಗಿ ವಿಕಲಚೇತನರ ಸಬಲೀಕರಣಕ್ಕಾಗಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡುತ್ತಿದ್ದು, ಜಿಲ್ಲೆಯ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಜಾದ ನಗರ, ರಾಯಚೂರು ಇವರ ಕಚೇರಿ ದೂರವಾಣಿ ಸಂಖ್ಯೆ 08532-200992 ಇವರಿಂದ ಅರ್ಜಿ ಪಡೆದು ಅಕ್ಟೋಬರ್ 10ರೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ. ತಡವಾಗಿ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande