ಕೊಪ್ಪಳ : ಆಗಸ್ಟ್ 7ರಂದು ನೇರ ಸಂದರ್ಶನ
ಕೊಪ್ಪಳ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿ
ಕೊಪ್ಪಳ : ಆಗಸ್ಟ್ 7ರಂದು ನೇರ ಸಂದರ್ಶನ


ಕೊಪ್ಪಳ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನವನ್ನು ಆಗಸ್ಟ್ 7ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಈ ನೇರ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಆಗಮಿಸಿ, ತಮ್ಮಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

8ನೇ ತರಗತಿ ಮೇಲ್ಪಟ್ಟು ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬಿ.ಇ-ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಮತ್ತು ಬಿ.ಇ.-ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಅಭ್ಯರ್ಥಿಗಳು ಟೀಚಿಂಗ್ ಫೀಲ್ಡ್‍ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವಾಕ್ ಇನ್ ಇಂಟರ್‍ವ್ಯೂವ್‍ನಲ್ಲಿ ಭಾಗವಹಿಸಲಿಚ್ಛೀಸುವ 18 ರಿಂದ 30 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande