ಸೊಳ್ಳೆ ನಿಯಂತ್ರಣ : ಸಾರ್ವಜನಿಕರ ಸಹಕಾರ ಅಗತ್ಯ-ಡಾ.ಆರ್.ಅಬ್ದುಲ್ಲಾ
ಬಳ್ಳಾರಿ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಡಾ.ಆರ್.ಅಬ್ದುಲ್ಲಾ ಅವರು ಹೇಳಿದ್ದಾರೆ. ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ವಣೇನೂರು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಅವರು ಮ
ಸೊಳ್ಳೆ ನಿಯಂತ್ರಣ : ಸಾರ್ವಜನಿಕರ ಸಹಕಾರ ಅಗತ್ಯ: ಡಾ.ಆರ್.ಅಬ್ದುಲ್ಲಾ


ಬಳ್ಳಾರಿ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಡಾ.ಆರ್.ಅಬ್ದುಲ್ಲಾ ಅವರು ಹೇಳಿದ್ದಾರೆ.

ಬಳ್ಳಾರಿ ತಾಲ್ಲೂಕಿನ ಮೋಕ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ವಣೇನೂರು ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಅವರು ಮಾತನಾಡಿದರು.

ಮಳೆ ನೀರು ನಿಲ್ಲುವುದರಿಂದ ಡೆಂಗ್ಯು ಹರಡುವ ಈಡಿಸ್ ಇಜಿಪ್ಟೈ ಸೊಳ್ಳೆಯ ಸಂತತಿ ಹೆಚ್ಚಾಗಿದ್ದು, ಡೆಂಗ್ಯು ಪ್ರಕರಣ ಕಂಡುಬರುವ ಸಾಧ್ಯತೆಗಳಿದ್ದು ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಹಾಗೂ ಬಳಕೆಗಾಗಿ ನೀರು ತುಂಬುವ ಪರಿಕರಣಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸಬೇಕು ಎಂದು ಹೇಳಿದರು.

ಯಾರಿಗಾದರೂ 3 ದಿನಗಳ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿಲ್ರ್ಯಕ್ಷಿಸದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಲಕ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಎನ್‍ವಿಬಿಡಿಸಿಪಿ ಸಲಹೆಗಾರ ಪ್ರತಾಪ್, ಸಮುದಾಯ ಆರೋಗ್ಯ ಅಧಿಕಾರಿ ತಿಮ್ಮರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಸೇರಿದಂತೆ ಆಶಾಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande