ಬೆಂಗಳೂರು, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಆಗಸ್ಟ್ 10ರಂದು ಬೆಂಗಳೂರಿನ ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದರಿಂದ ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಇಂದು ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರಯಾಣಿಸುವ ಮೂಲಕ ಕಾಮಗಾರಿ ಹಾಗೂ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಅವರು,
ಮೆಟ್ರೋ 3ನೇ ಹಂತದ ಹಳದಿ ಮಾರ್ಗವು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸುಮಾರು 19.15 ಕಿಲೋ ಮೀಟರ್ ಉದ್ದವಿದ್ದು, 16 ನಿಲ್ದಾಣಗಳಿವೆ. ಹಳದಿ ಮಾರ್ಗ ಮೆಟ್ರೋ ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸಿಲ್ಕ್ ಬೋರ್ಡ್ ಸೇರಿದಂತೆ ಹಲವಾರು ಭಾಗದಲ್ಲಿ ಸಂಚಾರ ದಟ್ಟಣೆಗೆ ಪರಿಹಾರವಾಗಲಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa