ವಿಜಯಪುರ, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಇದರಿಂದಗಿ ಸಾರ್ವಜನಿಕರಿಗೆ ಬಾಗಲಕೋಟೆಯ ನವನಗರ ಬಸ್ ನಿಲ್ದಾಣ, ಹಳೇ ಬಾಗಲಕೋಟ ಬಸ್ ನಿಲ್ದಾಣ ದಲ್ಲಿ ಪ್ರಯಾಣಿಕರು ಬಸ್ ಸಂಚಾರ ಇಲ್ಲದ್ದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ.
ಇದರಿಂದ ಪ್ರಯಾಣಿಕರು ಆತಂಕ ಶುರುವಾಗಿದೆ., ಕೆಎಸ್ಆರ್ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆಗಳಿಗೆ ಕಾಲೇಜುಗಳಿಗೆ ಹೋಗಲು ಪರದಾಡಬೇಕಾದ ಆತಂಕದಲ್ಲಿದ್ದಾರೆ.
ಇದರ ನಡುವೆ ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಅಭಯ ನೀಡಿತ್ತು. ಸಾರಿಗೆ ನಿಗಮಗಳು ತಮ್ಮದೇ ಆದ ವ್ಯವಸ್ಥೆಗಳನ್ನು ಮಾಡಿಕೊಂಡಿವೆ ಎಂದು ಸಾರಿಗೆ ಇಲಾಖೆ ನಿನ್ನೆ ತಿಳಿಸಿತ್ತು.
ವೇತನ ಪರಿಷ್ಕರಣೆ ಸಹಿತ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯದ ಸಾರಿಗೆ ನಿಗಮಗಳ ನೌಕರರು ನಿನ್ನೆಯಿಂದ ಮುಷ್ಕರ ಆರಂಭಿಸಿದ್ದು, ಕೆಎಸ್ಸಾರ್ಟಿಸಿ ಬಸ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.
ವಿದ್ಯಾರ್ಥಿಗಳು, ಕಚೇರಿಗೆ ತೆರಳುವ ನೌಕರರು ಸೇರಿದಂತೆ ಸಾರ್ವಜನಿಕರು ಬಸ್ಗಳಿಲ್ಲದೆ ಪರದಾಡುವಂತಾಗಿದೆ.
ಹಲವೆಡೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಜನರು ಖಾಸಗಿ ವಾಹನಗಳನ್ನು ಆಶ್ರಯಿಸುತ್ತಿರುವುದು ಕಂಡು ಬಂದಿದೆ.
ರಾಜ್ಯ ಸಾರಿಗೆ ನಿಗಮಗಳ ನೌಕರರು ಬೇಡಿಕೆಗಳೊಂದಿಗೆ ಮುಷ್ಕರ ಆರಂಭಿಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ ಪಾವತಿ ಪಾವತಿಸುವಂತೆ ಆಗ್ರಹಿಸಿದ್ದಾರೆ.
2020ರ ಜನವರಿ 1 ರಿಂದ ಶೇ.15ರಷ್ಟು ವೇತನ ಪರಿಷ್ಕರಣೆ ಆಗಿರುವುದನ್ನು ಸರಕಾರ ಈವರೆಗೆ ಅನುಷ್ಠಾನಗೊಳಿಸದೆ ಬಾಕಿ ಉಳಿಸಿದೆ ಎಂದು ನೌಕರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande