ಹಟ್ಟಿ ಚಿನ್ನದ ಗಣಿ : ಗುಂಡೂರಾವ್ ಬಳಿಕ ಸಿದ್ಧರಾಮಯ್ಯ ಪ್ರಥಮ ಭೇಟಿ-ಜೆ.ಟಿ.ಪಾಟೀಲ
ರಾಯಚೂರು, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಸೇರಿದಂತೆ ಆನೇಕ ಗಣ್ಯ ಮಹನಿಯರು ಭಾಗಿಯಾಗಲಿರುವ, ಆಗಸ್ಟ್ 6ರಂದು ಮಧ್ಯಾಹ್ನ 12 ಗಂಟೆಗೆ ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿರುವ ಹಟ್
ಹಟ್ಟಿ ಚಿನ್ನದ ಗಣಿ:  ಸಿಎಂ ಆರ್ ಗುಂಡೂರಾವ್ ಅವರ ಭೇಟಿ ಬಳಿಕ ಸಿಎಂ ಸಿದ್ಧರಾಮಯ್ಯ ಅವರ ಪ್ರಥಮ ಭೇಟಿ :  ಜೆ.ಟಿ.ಪಾಟೀಲ


ಹಟ್ಟಿ ಚಿನ್ನದ ಗಣಿ:  ಸಿಎಂ ಆರ್ ಗುಂಡೂರಾವ್ ಅವರ ಭೇಟಿ ಬಳಿಕ ಸಿಎಂ ಸಿದ್ಧರಾಮಯ್ಯ ಅವರ ಪ್ರಥಮ ಭೇಟಿ :  ಜೆ.ಟಿ.ಪಾಟೀಲ


ರಾಯಚೂರು, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಸೇರಿದಂತೆ ಸಂಪುಟದ ಸಚಿವರು, ಶಾಸಕರು ಸೇರಿದಂತೆ ಆನೇಕ ಗಣ್ಯ ಮಹನಿಯರು ಭಾಗಿಯಾಗಲಿರುವ, ಆಗಸ್ಟ್ 6ರಂದು ಮಧ್ಯಾಹ್ನ 12 ಗಂಟೆಗೆ ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿರುವ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭಕ್ಕೆ ಎಲ್ಲಾ ರೀತಿಯ ಅಗತ್ಯ ಸಿದ್ದತೆಯಾಗಿದೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ ಅವರು ಹೇಳಿದರು.

ಹಟ್ಟಿ ಚಿನ್ನದ ಗಣಿ ಕಂಪನಿಯ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 5ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

1980ರಲ್ಲಿ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಆರ್. ಗುಂಡೂರಾವ್ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅದಾದ ಬಳಿಕ 42 ವರ್ಷದ ನಂತರ ಸಿದ್ದರಾಮಯ್ಯನವರು ಹಟ್ಟಿ ಚಿನ್ನದ ಗಣಿ ಕಂಪನಿಯ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿ ಆವರಣದಲ್ಲಿ ಅಂದಾಜು 998 ಕೋಟಿ ರೂ. ಮೊತ್ತದಲ್ಲಿ ವಸತಿ ಸಮುಚ್ಛಯ, ಶಾಲೆ, ಆಸ್ಪತ್ರೆ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಜೊತೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್. ಶಿವರಾಜ ಪಾಟೀಲ್, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಷಿ, ಚಂದ್ರಶೇಖರ್ ಬಿ.ಪಾಟೀಲ್, ಶರಣಗೌಡ ಪಾಟೀಲ್ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ಹಟ್ಟಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಎಂ.ಡಿ. ಸಮ್ದಾನಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಲಿಂಗಸುಗೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವೆಂಕಟೇಶ್ ಆರ್.ಗುತ್ತೇದಾರ ಅವರು ಅತಿಥಿಗಳಾಗಿ ಭಾಗಿಯಾಗಲಿದ್ದಾರೆ. ಲಿಂಗಸುಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್ ಅವರು ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಆರ್ಥಿಕ ಇಲಾಖೆ, ಸರ್ಕಾರದ ಲೋಕೋಪಯೋಗಿ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಟ್ಟಿ, ಲಿಂಗಸೂರ, ಸಿರವಾರ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಿಂದ ಅಂದಾಜು 20,000 ಜನರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಹಟ್ಟಿ ಚಿನ್ನದ ಗಣಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಆರ್.ಶಿಲ್ಪ, ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಕಾಶ ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande