ನವದೆಹಲಿ, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ (79) ದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಕಳೆದ ಕೆಲವು ತಿಂಗಳುಗಳಿಂದ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಮೇ 11 ರಂದು ತೀವ್ರ ಮೂತ್ರನಾಳದ ಸೋಂಕು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಮೂತ್ರಪಿಂಡ ವೈಫಲ್ಯ, ಮಧುಮೇಹ, ಅಧಿಕ ರಕ್ತದೊತ್ತಡ, ಉಸಿರುಗಟ್ಟುವಿಕೆ ಹಾಗೂ ಇತರ ದೀರ್ಘಕಾಲಿಕ ಆರೋಗ್ಯ ತೊಂದರೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಬಹು ಅಂಗಾಂಗ ವೈಫಲ್ಯಗಳ ಪರಿಣಾಮ ವೈದ್ಯಕೀಯ ತಂಡದ ಚಿಕಿತ್ಸೆ ಪ್ರಯತ್ನಗಳು ಫಲಿಸದೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa