ಚಿನ್ನದ ಬೆಲೆಯಲ್ಲಿ ಏರಿಕೆ, ಬೆಳ್ಳಿ ಬೆಲೆಯಲ್ಲಿ ಸ್ಥಿರತೆ
ನವದೆಹಲಿ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,510 ರೂ. ಏರಿಕೆಯಾಗಿ 1,01,560 ರೂ.ಗೆ ತಲುಪಿದೆ. ಇದೇ ವೇಳೆ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 93,110 ರೂ.ಗೆ ಮಾರಾಟವಾಗುತ್ತಿ
Rate


ನವದೆಹಲಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,510 ರೂ. ಏರಿಕೆಯಾಗಿ 1,01,560 ರೂ.ಗೆ ತಲುಪಿದೆ. ಇದೇ ವೇಳೆ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 93,110 ರೂ.ಗೆ ಮಾರಾಟವಾಗುತ್ತಿದೆ.

ಮುಖ್ಯ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಅಹಮದಾಬಾದ್, ಕೋಲ್ಕತ್ತಾ, ಲಕ್ನೋ, ಪಾಟ್ನಾ ಹಾಗೂ ಜೈಪುರದಲ್ಲಿ ಚಿನ್ನದ ಬೆಲೆಯಲ್ಲಿ ಈ ಏರಿಕೆಯಾಗಿದೆ. ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲೂ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 1,01,410 ರೂ.ಗೆ, 22 ಕ್ಯಾರೆಟ್ ಚಿನ್ನ 92,960 ರೂ.ಗೆ ಮಾರಾಟವಾಗುತ್ತಿದೆ.

ಇದೇ ವೇಳೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿ ಮಾರುಕಟ್ಟೆಯಲ್ಲಿ 1 ಕಿಲೋಗ್ರಾಂ ಬೆಳ್ಳಿ 1,12,900 ರೂಗಳಲ್ಲಿ ಮಾರಾಟವಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande