ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ರ್ಯಥಿಗಳಿಂದ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 11 ರ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ


ಬಳ್ಳಾರಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ರ್ಯಥಿಗಳಿಂದ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಲಾಗಿದೆ.

ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯಪಿಎಸ್‍ಸಿ ನಾಗರೀಕ ಸೇವೆ, ಕೆಎಎಸ್, ಗೆಜೆಟೆಡ್ ಪ್ರೊಬೆಷನರಿ, ಗ್ರೂಪ್-ಸಿ, ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆನ್‍ಲೈನ್ ಪೋರ್ಟಲ್ ಲಿಂಕ್ https://sevasindhu.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು.

ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಲ್ಲಿ ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿಯೂ ಸಹ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande