ಬಳ್ಳಾರಿ, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ `ಮತಗಳವು' ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಮನಸ್ಥಿತಿಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 8ರ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ತಿಳಿಸಿದ್ದಾರೆ.
`ಆಪರೇಶನ್ ಸಿಂಧೂರ್' ಚರ್ಚೆಯಲ್ಲಿ ವಿರೋಧ ಪಕ್ಷದ ಧ್ವನಿಯಲ್ಲಿ ಅಡಗಿಸಲಾಗಿದೆ. ಆಪರೇಷನ್ ಸಿಂಧೂರ್‍ನಲ್ಲಿ ಹುತಾತ್ಮರಾದ ಸೈನಿಕರ ಕುಟುಂಬಗಳ ಮಾಹಿತಿ ನೀಡುತ್ತಿಲ್ಲ. ಆಪರೇಷನ್ ಸಿಂಧೂರ ಕುರಿತು ಕೇಂದ್ರ ಸರ್ಕಾರ ವಿರೋಧ ಪಕ್ಷದ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸುತ್ತಿಲ್ಲ. ಅಲ್ಲದೇ, ಕರ್ನಾಟಕದ ವಿವಿಧಡೆಗಳಲ್ಲಿ `ಮತಗಳವು' ನಡೆದಿದ್ದು, ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಪ್ರತಿಭಟನೆಯಲ್ಲಿ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್‍ಗಾಂಧಿ, ಕರ್ನಾಟಕ ಉಸ್ತುವಾರಿ ಸುರ್ಜೆವಾಲ ಅವರು, ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ರಾಜ್ಯದ ಎಲ್ಲಾ ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್