ಬೆಂಗಳೂರು, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ, ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಈ ಸರ್ಕಾರ ದಿವಾಳಿ ಆಗಿದ್ದು, ನೌಕರರ ಹೊಟ್ಟೆ ಮೇಲೆ ಹೊಡೆಯಬಾರದು. ಅವರ ನ್ಯಾಯಯುತ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು” ಎಂದು ಅವರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ 15% ಸಂಬಳ ಹೆಚ್ಚಳ ಮಾಡಿದ್ದೆವು. ₹480 ಕೋಟಿ ಬಿಡುಗಡೆ ಮಾಡಿ ನೌಕರರ ಬೇಡಿಕೆ ಈಡೇರಿಸಿದ್ದೆವು” ಎಂದರು.
ಕೋವಿಡ್ ಸಂದರ್ಭದಲ್ಲಿ ವೇತನ ಹೆಚ್ಚಳವಿಲ್ಲದಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅಂದು ವಿಶ್ವದ ಯಾವುದೆ ಸರ್ಕಾರವೂ ವೇತನ ಹೆಚ್ಚಿಸಿರಲಿಲ್ಲ. ಆದರೆ ನೌಕರರಿಗೆ ಸಂಬಳ ಕೊಡಲಾಗುತ್ತಿತ್ತು” ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ರೆ ಮಾಡದೇ, ನೌಕರರ ಜೊತೆ ಸಭೆ ನಡೆಸಿ ಪರಿಹಾರ ಕಂಡುಹಿಡಿಯಿರಿ. ಆಗದಿದ್ದರೆ ಅಧಿಕಾರ ತ್ಯಜಿಸಿ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa