ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ
ಶಿವಮೊಗ್ಗ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಕ್ರೀಡಾ ಕೂಟವನ್ನು ಆಯಾ ತಾಲ್ಲೂಕುಗಳಲ್ಲಿ ಆಯೋಜ
ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ


ಶಿವಮೊಗ್ಗ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಕ್ರೀಡಾ ಕೂಟವನ್ನು ಆಯಾ ತಾಲ್ಲೂಕುಗಳಲ್ಲಿ ಆಯೋಜನೆ ಮಾಡಲಾಗಿದೆ. ದಿ: 16-08-2025 ರಂದು ನೆಹರು ಕ್ರೀಡಾಂಗಣ ಶಿವಮೊಗ್ಗ. ದಿ: 17-08-2025 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿ. ದಿ: 22-08-2025 ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ. ದಿ: 23-08-2025 ರಂದು ತಾಲ್ಲೂಕು ಕ್ರೀಡಾಂಗಣ ಹೊಸನಗರ. ದಿ: 24-08-2025 ರಂದು ನೆಹರೂ ಮೈದಾನ ಸಾಗರ, ವಿ.ಐ.ಎಸ್.ಎಲ್. ಕ್ರೀಡಾಂಗಣ ಭದ್ರಾವತಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಸೊರಬ ಇಲ್ಲಿ ನೆಡೆಸಲಾಗುವುದು.

ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ ಬಾಲ್, ಖೋ ಖೋ, ಕಬಡ್ಡಿ, ಥ್ರೋಬಾಲ್, ಮತ್ತು ಯೋಗಾಸನ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದೆ. ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.

ಆಯಾ ತಾಲ್ಲೂಕಿನ ಕ್ರೀಡಾಪಟುಗಳು ಆಯಾ ತಾಲ್ಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಮೂಲ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಬೇರೆ ತಾಲ್ಲೂಕಿನ ಆಟಗಾರರು ಭಾಗವಹಿಸಬೇಕಾದರೆ ಆ ತಾಲ್ಲೂಕಿನಲ್ಲಿ ಅವರು ಶಿಕ್ಷಣ ಪಡೆಯುತ್ತಿರಬೇಕು. ಒಂದು ವೇಳೆ ಬೇರೆ ತಾಲ್ಲೂಕಿನ ಆಟಗಾರರು ಕ್ರೀಡೆಯಲ್ಲಿ ಪಾಲ್ಗೂಂಡಲ್ಲಿ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.

ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಬೆಳಿಗ್ಗೆ 9.30 ಗಂಟೆಯೊಳಗೆ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಉಪಹಾರದ ವ್ಯವಸ್ಥೆ ಇರುತ್ತದೆ. ಕ್ರೀಡಾಕೂಟವನ್ನು ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಏರ್ಪಡಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಹಾಜರಿರದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಮನವಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ದೂ.ಸಂ.08182-223328 ಗೆ ಸಂರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖಾ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande