ಧಾರವಾಡ ಜನತೆಗೆ ತಟ್ಟಿದ ಸಾರಿಗೆ ಮುಷ್ಕರದ ಬಿಸಿ
ಧಾರವಾಡ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ವೇತನ ಪರಿಷ್ಕರಣೆ ಹಾಗೂ ಬಾಕಿ ವೇತನ ಪಾವತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಇಂದಿನಿಂದ ಬಸ್‌ ಸಂಚಾರ ಬಂದ್‌ ಮಾಡಿ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ಬಿಸಿ ಧಾರವಾಡದ ಪ್ರಯಾಣಿಕರಿಗೂ ತಟ್ಟಿದೆ. ಧಾರ
Bus


ಧಾರವಾಡ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ವೇತನ ಪರಿಷ್ಕರಣೆ ಹಾಗೂ ಬಾಕಿ ವೇತನ ಪಾವತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಇಂದಿನಿಂದ ಬಸ್‌ ಸಂಚಾರ ಬಂದ್‌ ಮಾಡಿ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರದ ಬಿಸಿ ಧಾರವಾಡದ ಪ್ರಯಾಣಿಕರಿಗೂ ತಟ್ಟಿದೆ.

ಧಾರವಾಡದ ಹೊಸ ಬಸ್ ನಿಲ್ದಾಣ, ಬಿಆರ್‌ಟಿಎಸ್‌ ನಿಲ್ದಾಣ, ಹಳೇ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚರಿಸದಿರುವುದರಿಂದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಧಾರವಾಡದ ಡಿಪೋ ಹಾಗೂ ಹೊಸ ಬಸ್‌ ನಿಲ್ದಾಣಕ್ಕೆ ಭೇಟಿ ನೀಡಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕಿ ಪ್ರಿಯಾಂಗಾ ಅವರು ಪರಿಸ್ಥಿತಿ ಅವಲೋಕಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, 9 ವಿಭಾಗಗಳಿವೆ. 6 ಜಿಲ್ಲೆಗಳಲ್ಲಿ ಬಸ್‌ ಸಂಚಾರ ಮಾಡುತ್ತಿವೆ. ಬೆಳಿಗ್ಗೆಯಿಂದಲೇ ಬಸ್‌ ಸಂಚಾರಕ್ಕೆ ಒತ್ತು ನೀಡಲಾಗಿತ್ತು.

ನೌಕರರಿಗೂ ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಲಾಗಿತ್ತು. ಬಿಆರ್‌ಟಿಎಸ್ ಸಿಬ್ಬಂದಿ ಕೂಡ ಕೆಲಸಕ್ಕೆ ಹಾಜರಾಗಿಲ್ಲ. ಕರ್ತವ್ಯಕ್ಕೆ ಹಾಜರಾಗಲೇಬೇಕು ಎಂದು ಸೂಚನೆ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande