ಬೆಂಗಳೂರು, 05 ಆಗಸ್ಟ್ (ಹಿ.ಸ.) :
ಆ್ಯಂಕರ್ : 2024 ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಯಾವುದೇ ರೀತಿಯ ಅನುಮತಿ ಇಲ್ಲದೆ ಮರ ಕತ್ತರಿಸಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದೆ.
ಪ್ರಾಚೀನ ಕಾಲದ ತಡೆಗೋಡೆಯನ್ನು ನೆಲಸಮ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿ, ಸಾರ್ವಜನಿಕರ ಆಸ್ತಿಯನ್ನು ನಷ್ಟಪಡಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದೆ ಎಂದು ಆರೋಪಿಸಿ ಬಿಜೆಪಿ ನಿಯೋಗವು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿತು.
ನಿಯೋಗದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಎಸ್. ದತ್ತಾತ್ರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa