ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ
ರಾಯಚೂರು, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಸತಿ ಮತ್ತು ನಿವೇಶನ ರಹಿತರಿಂದ ಅರ್
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ


ರಾಯಚೂರು, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಸತಿ ಮತ್ತು ನಿವೇಶನ ರಹಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉಪ ಘಟಕವಾದ ಎ.ಎಚ್.ಪಿ ಯೋಜನೆಯಡಿ ಪಾಲಿಕೆ ವ್ಯಾಪ್ತಿಯಲ್ಲಿ 2,419 ಗುಂಪು ಮನೆಗಳು ಜಿ+3 ಮಾದಿಯಲ್ಲಿ ನಿರ್ಮಾಣವಾಗುತ್ತಿದು,್ದ ಈಗಾಗಲೆ ಕಚೇರಿಗೆ ಸ್ವೀಕೃತವಾದ ಅರ್ಜಿಗಳನ್ನು ಆಯ್ಕೆಮಾಡಿದ್ದು, ವಸತಿ ಮತ್ತು ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಂದ ಅತಿ ಕಡಿಮೆ ಅರ್ಜಿಗಳು ಸ್ವೀಕೃತವಾಗಿವೆ.

ಈ ವರ್ಗದ ಫಲಾನುಭವಿಗಳ ಆಯ್ಕೆ ಬಾಕಿಯಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅರ್ಹ ಫಲಾನುಭವಿಗಳು ಆಗಸ್ಟ್ 20ರೊಳಗಾಗಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು, ಹಾಗೂ ನಗರ ಆಶ್ರಯ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande