ಧಾರವಾಡ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದ ಆತ್ಮ ಯೋಜನೆಯಡಿ ಕೃಷಿ ವಲಯದಲ್ಲಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕಸಿ ಅಭಿವೃದ್ದಿ, ಸಸ್ಯಕಾಶಿ ಇತ್ಯಾದಿ), ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ವಿಭಾಗಗಳಲ್ಲಿ ತಮ್ಮದೇ ಆದ ಅಮೂಲ್ಯ ಅನ್ವೇಷಣೆ, ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಧಾರವಾಡ ಜಿಲ್ಲೆಯ ಪರಿಣಿತ ಕೃಷಿಕ ಮಹನಿಯರುಗಳನ್ನು ಗುರುತಿಸಿ, ಶ್ರೇಷ್ಠ ಕೃಷಿಕ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಲಾಗುತ್ತದೆ.
2025-26 ನೇ ಸಾಲಿನ ಧಾರವಾಡ ಜಿಲ್ಲೆಯ ರೈತರಿಂದ, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಜಂಟಿ ಕೃಷಿ ನಿರ್ದೇಶಕರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಾಧನೆಗಳ ವಿವರ ಬರೆದು ಆಗಸ್ಟ್ 30, 2025 ರೊಳಗಾಗಿ ಅರ್ಜಿ ಸಲ್ಲಿಸಲುಬಹುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಆತ್ಮ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa