ಬಳ್ಳಾರಿ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಯಚೂರು ಪಟ್ಟಣದಲ್ಲಿ ಕಳ್ಳತನ ಮಾಡಿ ಬಳ್ಳಾರಿ ನಗರದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಒಬ್ಬನನ್ನು ಪೊಲೀಸರು ವಿಚಾರಣೆ ನಡೆಸಿ, ಆರೋಪಿಯಿಂದ 4 ಲಕ್ಷದ 8 ಸಾವಿರದ 40 ರೂಪಾಯಿ ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳನ್ನು ವಶಕ್ಕೆ ಪಡೆದುಕೊಂಡು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿಯ ಶಿವಮೊಗ್ಗದ ವಿನೋಬನಗರ ನಿವಾಸಿಯಾಗಿದ್ದು, ಮೂಲತಃ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಪ್ಪಿನಕೇರಿ ಗ್ರಾಮದ ನಿವಾಸಿ ಗೌತಮ್‍ರಾಜ್ ಅಲಿಯಾಸ್ ಪೋತರಾಜ್ ಅಲಿಯಾಸ್ ಸದ್ದಾಂ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಚೂರು ಜಿಲ್ಲೆಯ ನೇತಾಜಿ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದು, ಆರೋಪಿಯಿಂದ 71.40 ಗ್ರಾಂ ತೂಕದ ಬಂಗಾರದ ಸರ, ಉಂಗುರಗಳು, ಕಿವಿಯೋಲೆಗಳು ಹಾಗೂ 440 ಗ್ರಾಂ ತೂಕದ ಬೆಳ್ಳಿಯ ತಟ್ಟೆಗಳು, ಬಟ್ಟಲುಗಳು, ಇತ್ಯಾದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರೂಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್