ವಿಜಯಪುರ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರದಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ಇಲಾಖೆ ನೌಕರರು ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದರು. ಇದರ ಪರಿಣಾಮ ನಿನ್ನೆ ಬಸ್ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಶಾಲಾ-ಕಾಲೇಜುಗಳು, ಕಚೇರಿಗಳಿಗೆ ದಿನನಿತ್ಯ ಓಡಾಡುವವರು ಬಸ್ ಸಿಗದೆ ಸಮಸ್ಯೆ ಎದುರಿಸಿದ್ದರು. ವಿಜಯಪುರ ಜಿಲ್ಲೆಯ ಹಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದರು. ಈ ಮಧ್ಯೆ ಮುಷ್ಕರ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸದ್ಯ ಮುಷ್ಕರ ಸ್ಥಗಿತಗೊಳಿಸುವಂತೆ ಸಾರಿಗೆ ನೌಕಕರಿಗೆ ತಾಕೀತು ಮಾಡಿತ್ತು. ಇಂದು ಮುಷ್ಕರ ಮುಂದುವರೆಸುವದಿಲ್ಲ ಎಂದು ಕೊರ್ಟ್ ಗೆ ತಿಳಿಸಲಾಗಿತ್ತು. ಅದರಂತೆ ವಿಜಯಪುರ ನಗರದ ಕೇಂದ್ರ ಹಾಗೂ ಸೈಟಲೈಟ್ ಬಸ್ ನಿಲ್ದಾಣದಿಂದ ಬಸ್ ಸಾರಿಗೆ ಆರಂಭಗೊಂಡಿದೆ. ಪಕ್ಕದ ರಾಜ್ಯಗಳು ಹಾಗೂ ಬೇರೆ ಜಿಲ್ಲೆಗೆ ಸಂಚರಿಸುವ ಬಸ್ ಗಳು ಸಂಚಾರ ಆರಂಭಿಸಿದವು. ಬಸ್ ಸಂಚಾರದಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande