ಡಿ.ದೇವರಾಜು ಅರಸು ಜಯಂತಿ : ನಾಳೆ ಪೂರ್ವಭಾವಿ ಸಭೆ
ರಾಯಚೂರು, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜಯಂತಿ ನಡೆಯಲಿದೆ. ಈ ಜಯಂತಿ ಅಂಗವಾಗಿ ಆಗಸ್ಟ್ 7ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿ
ಡಿ.ದೇವರಾಜು ಅರಸು ಜಯಂತಿ : ನಾಳೆ ಪೂರ್ವಭಾವಿ ಸಭೆ


ರಾಯಚೂರು, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 20 ರಂದು ಕರ್ನಾಟಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜಯಂತಿ ನಡೆಯಲಿದೆ.

ಈ ಜಯಂತಿ ಅಂಗವಾಗಿ ಆಗಸ್ಟ್ 7ರ ಬೆಳಿಗ್ಗೆ 11.30 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬಹುದಾಗಿದೆ.

ಅಂದು ನಡೆಯುವ ಪೂರ್ವಭಾವಿ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜಿಲ್ಲೆಯ ನಾನಾ ಸಮಾಜದ ಮುಖಂಡರುಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande