ಧರಾಲಿ ಪ್ರವಾಹ : ಪರಿಹಾರ ಕಾರ್ಯಾಚರಣೆ ತೀವ್ರ
ಡೆಹ್ರಾಡೂನ್, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಧರಾಲಿಯಲ್ಲಿ ಮೇಘಸ್ಫೋಟದಿಂದ ಉಂಟಾದ ಭೀಕರ ಪ್ರವಾಹದ ನಂತರ ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಾಜ್ಯ ಸರ್ಕಾರ ಉತ್ತರಕಾಶಿ ಜಿಲ್ಲೆಗೆ ₹20 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಸೇನೆ, ಎಸ್ ಡಿಆರ್ ಎಫ್, ಪ
Flood


ಡೆಹ್ರಾಡೂನ್, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದ ಧರಾಲಿಯಲ್ಲಿ ಮೇಘಸ್ಫೋಟದಿಂದ ಉಂಟಾದ ಭೀಕರ ಪ್ರವಾಹದ ನಂತರ ಯುದ್ಧೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ರಾಜ್ಯ ಸರ್ಕಾರ ಉತ್ತರಕಾಶಿ ಜಿಲ್ಲೆಗೆ ₹20 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಸೇನೆ, ಎಸ್ ಡಿಆರ್ ಎಫ್, ಪೊಲೀಸ್ ಇಲಾಖೆ ಸೇರಿದಂತೆ ನಾನಾ ಘಟಕಗಳು ಸಕ್ರಿಯವಾಗಿ ಪಾಲ್ಗೊಂಡಿವೆ.

ಇದುವರೆಗೆ 130 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ವೈದ್ಯರ ತಂಡ, ಆಹಾರ, ಔಷಧಿ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ಆರಂಭಿಸಲು ಸಿದ್ದತೆಗಳು ನಡೆದಿವೆ.

ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆಯ ಎಚ್ಚರಿಕೆ ನೀಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಯಾತ್ರೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande