ಹೊಸಪೇಟೆ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬೆಳೆಗಳಿಗೆ ವಿಮೆ ನೊಂದಾಯಿಸಲು ಆ.14 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಪಿ.ಜಿ.ಚಿದಾನಂದಪ್ಪರವರು ತಿಳಿಸಿದ್ದಾರೆ.
ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ ಮತ್ತು ಕೂಡ್ಲಿಗಿ ತಾಲೂಕಿನ ದಾಳಿಂಬೆ ಹಾಗೂ ಮೆಣಸಿನಕಾಯಿ ಬೆಳೆಗಳಿಗೆ ಮತ್ತು ಹರಪನಹಳ್ಳಿ ತಾಲೂಕಿನಲ್ಲಿನ ದಾಳಿಂಬೆ ಹಾಗೂ ಅಡಿಕೆ ಬೆಳೆಗಳಿಗೆ ವಿಮಾ ನೊಂದಾಯಿಸಲು, ಸಾಲ ಪಡೆಯದ ರೈತರ ನೋಂದಣಿಗೆ ಆ.14 ರಂದು ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಮತ್ತು ಸಾಲ ಪಡೆದ ರೈತರಿಗೆ ಆ.30 ರವರೆಗೆ ಬೆಳೆ ವಿಮೆ ನೋಂದಣಿಗಾಗಿ ಅವಕಾಶ ಕಲ್ಪಿಸಿಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್