ಬೆಂಗಳೂರು, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೂರು ದಿನಗಳಿಂದ ಕೇವಲ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಷ್ಟೇ ಅಲ್ಲ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕಳೆದ ರಾತ್ರಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಕೊಪ್ಪಳ, ಹಾಸನ, ಕೊಡಗಿಗೆ ಕಿತ್ತಳೆ ಎಚ್ಚರಿಕೆ ನೀಡಲಾಗಿದೆ.
ವಿಜಯನಗರ, ರಾಮನಗರ, ಮೈಸೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ,ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa