ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ
ರಾಯಚೂರು, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: https://sevasindhuservices,karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪ
ಯುವನಿಧಿ ಯೋಜನೆಯಡಿ ನೋಂದಣಿ, ಸ್ವಯಂ ಘೋಷಣೆಗೆ ಸೂಚನೆ


ರಾಯಚೂರು, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ವೆಬ್‍ಸೈಟ್ ವಿಳಾಸ: https://sevasindhuservices,karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿ ಮತ್ತು ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ಮೂರನೇ ತಿಂಗಳಿನ 5ನೇ ತಾರೀಕಿನಿಂದ 25ನೇ ತಾರೀಕಿನೊಳಗೆ ಸ್ವಯಂ-ಘೋಷಣೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸ್ವಯಂ ಘೋಷಣೆಯನ್ನು ಆಗಸ್ಟ್ 25ರೊಳಗೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 08532-231684ಗೆ ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಪತ್ರಿಕಾ ಪ್ರಕಟಣೆಯನು ಉದ್ಯೋಗಾಧಿಕಾರಿಗಳಾದ ನವೀನಕುಮಾರ ಸಂಗೇಪಾಗ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande