ಪರಿಸರ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಮಹತ್ವದ ಪಾತ್ರ : ಈಶ್ವರ ಖಂಡ್ರೆ
ಬೀದರ್, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೀದರನ ಗುರುನಾನಕ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಪರಿಸರ ಜ
Workshop


ಬೀದರ್, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೀದರನ ಗುರುನಾನಕ್ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಪರಿಸರ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದಾಗಿದೆ ಎಂದರು.

ಮಾಧ್ಯಮಗಳು ಸಮಾಜದ ಚೇತನ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿವೆ. ಪರಿಸರ ನಾಶ, ಹವಾಮಾನ ಬದಲಾವಣೆ, ಜಲಸಂಕಷ್ಟ, ಮತ್ತು ವನ್ಯಜೀವಿಗಳ ಸಂರಕ್ಷಣೆಯಂತಹ ವಿಷಯಗಳಲ್ಲಿ ಜಾಗೃತಿ ಮೂಡಿಸಲು ಮಾಧ್ಯಮಗಳ ಪಾತ್ರ ಅತ್ಯಂತ ಅಗತ್ಯವಾಗಿದೆ.

ಸರ್ಕಾರ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಈ ಕಾರ್ಯಗಳಲ್ಲಿ ಮಾಧ್ಯಮಗಳ ಸಹಕಾರ ಮತ್ತು ಸಹಭಾಗಿತ್ವ ಅನಿವಾರ್ಯವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಮಾಧ್ಯಮ ಅಕ್ಯಾಡೆಮಿ ಅಧ್ಯಕ್ಷೆ ಆಯಿಶಾ ಖಾನಂ, ಹಿರಿಯ ಪತ್ರಕರ್ತ ಅಕ್ಯಾಡೆಮಿ ಸದಸ್ಯ ಅಬ್ಬಾಸ ಮುಲ್ಲಾ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು, ಹಾಗೂ ಅಧಿಕಾರಿಗಳಿಗೆ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande