ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ.ಸಿಇಒ
ಹಾಸನ, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್ ಪೂರ್ಣಿಮಾ ಅವರು ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೆಹಳ್ಳಿ ಹೋಬಳಿಯ ಅಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಳಲು, ಅಕ್ಕನಹಳ್ಳಿ, ಶೆಟ್ಟಿಹಳ್ಳಿ, ಎಂ ದಾಸಪುರ ಗ್ರಾಮಗಳು ಹಾಗೂ ಜ
Visit


ಹಾಸನ, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಆರ್ ಪೂರ್ಣಿಮಾ ಅವರು ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೆಹಳ್ಳಿ ಹೋಬಳಿಯ ಅಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಳಲು, ಅಕ್ಕನಹಳ್ಳಿ, ಶೆಟ್ಟಿಹಳ್ಳಿ, ಎಂ ದಾಸಪುರ ಗ್ರಾಮಗಳು ಹಾಗೂ ಜಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದನಹಳ್ಳಿ ಕಾರೆಕೆರೆ ಗ್ರಾಮಗಳು ಮತ್ತು ಶ್ರವಣಬೆಳಗೊಳ ಹೋಬಳಿಯ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ನಿರ್ದೇಶಕರು, ಸಹಾಯಕ ಇಂಜಿನಿಯರ್ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಪಿಡಿಒ ಗಳು ಮತ್ತು ಸಿಬ್ಬಂದಿ ಹಾಜರಿದ್ದರು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande