ಹುಬ್ಬಳ್ಳಿ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025ನೇ ಸಾಲಿನ ಪ್ರತಿಷ್ಠಿತ ಬಸವ ಪುರಸ್ಕಾರಕ್ಕೆ ಹೆಸರಾಂತ ಉದ್ಯಮಿ ಹಾಗೂ ಸಮಾಜಸೇವಕ ಡಾ.ವಿ.ಎಸ್.ವಿ. ಪ್ರಸಾದ್ ಭಾಜನರಾಗಿದ್ದಾರೆ. ಈ ಬಗ್ಗೆ ಬಸವ ಪರಿಷತ್ ಅಧ್ಯಕ್ಷೆ ರೇಖಾ ಹಿರೇಮಠ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾತೇಶ ಹಿರೇಮಠ ಮಾಹಿತಿ ನೀಡಿದ್ದಾರೆ.
2015ರಲ್ಲಿ ಸ್ಥಾಪನೆಯಾದ ಈ ಪರಿಷತ್ ಕಳೆದ ನಾಲ್ಕು ವರ್ಷಗಳಿಂದ ತಮ್ಮದೇ ಆದ ತಾತ್ವಿಕ ನಿಲುವಿನಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಗಣ್ಯರನ್ನು ಗುರುತಿಸುತ್ತಾ ಬಂದಿದೆ. ಈ ಸಲದ ಪುರಸ್ಕೃತ ಪಟ್ಟಿಯಲ್ಲಿ ಉದ್ಯಮ, ನ್ಯಾಯ, ವಿಜ್ಞಾನ, ಶಿಕ್ಷಣ, ಸಾಮಾಜಿಕ ಸೇವೆ, ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ 15 ಗಣ್ಯರನ್ನು ಆಯ್ಕೆ ಮಾಡಲಾಗಿದ್ದು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಡಾ. ಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ.
ಹುಬ್ಬಳ್ಳಿಯ ಡಾ. ಪ್ರಸಾದ್ ಅವರು 'ಸ್ವರ್ಣಾ ಗ್ರೂಪ್ ಆಫ್ ಕಂಪನಿ ಸ್ಥಾಪಿಸಿ, ನಿರ್ಮಾಣ ಕ್ಷೇತ್ರದಲ್ಲಿ ಗುಣಮಟ್ಟದ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ವೃತ್ತಿಗೆ ಪೂರಕವಾಗಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಸೇವೆಗಳಿಂದ ಹೆಸರು ಗಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಇದೇ 9ರಂದು, ಬೆಂಗಳೂರಿನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದ ಕೊಂಡಜ್ಜಿ ಬಸವ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಸುತ್ತೂರು ಮಠದ ಜಗದ್ಗುರು ಡಾ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa