ಬಳ್ಳಾರಿ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ತಿಳಿಸಿದ್ದಾರೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೆÇೀರ್ಟಲ್‍ನಲ್ಲಿ ನೂತನವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಜನ್ ಲಾಗಿನ್ ಅಥವಾ ಆರ್‍ಎಸ್‍ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳೊಂದಿಗೆ ತಮ್ಮ ಎಫ್‍ಐಡಿಯನ್ನು ನಮೂದಿಸಬೇಕು. ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನವಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್