ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಅಹ್ವಾನ
ಬಳ್ಳಾರಿ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಮತ್ತು ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ. ಸಮಗ್ರ ಕೃಷಿ ಪದ್ಧ
ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಅಹ್ವಾನ


ಬಳ್ಳಾರಿ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಮತ್ತು ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ.

ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ, ಬೆಳೆ ವೈವಿಧ್ಯಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರ್ಹ ರೈತರು ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ಆತ್ಮ ಯೋಜನೆಯಡಿ ಕೃಷಿ ಪಂಡಿತ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಹಾಗೂ ರೈತ ಮಹಿಳೆರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಆಯಾ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande