ಕೊಪ್ಪಳ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆ ಮಂಡಲಗಿರಿಯ ಜಗದ್ಗುರು ತೋಂಟದಾರ್ಯ ಕೈಗಾರಿಕಾ ತರಬೇತಿ ಸಂಸ್ಥೆ (ಐ.ಟಿ.ಐ ಕಾಲೇಜು) ವತಿಯಿಂದ ಅಪ್ರೆಂಟಿಸ್ ಮೇಳವನ್ನು ಆಗಸ್ಟ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಆಯೋಜಿಸಲಾಗಿದೆ.
ಈ ಮೇಳದಲ್ಲಿ ಖಾಸಗಿ ಕಂಪನಿಗಳಾದ ಜಿ.ಎಸ್.ಡಬ್ಲ್ಯೂ. ಸ್ಟೀಲ, ತೋರಣಗಲ್ (ಬಳ್ಳಾರಿ) ಮತ್ತು ಇಂಡೋ ಎಮ್.ಆಯ್.ಎಮ್ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಸಂಸ್ಥೆಗಳು ಭಾಗವಹಿಸಲಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಐಟಿಐ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಈ ಅಪ್ರೆಂಟಿಸ್ ಮೇಳದಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕವಿಲ್ಲ ಹಾಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.
18 ರಿಂದ 24 ವರ್ಷದ ನಿರುದ್ಯೋಗಿ ಯುವಕರು ಮತ್ತು ಯುವತಿಯರು ಈ ಅವಕಾಶವನ್ನು ಬಳಸಿಕೊಳಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ದೃಢೀಕರಿಸಲಾದ ಪ್ರಮಾಣ ಪತ್ರಗಳ 3 ಪ್ರತಿ, ಆಧಾರ್ ಕಾರ್ಡಿನ ಪ್ರತಿಯನ್ನು, ಬಯೋಡಾಟಾ ಮತ್ತು ಪಾಸ್ ಪೆÇೀರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ಮಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್