ಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳಿಗೆ ತಾತ್ಕಾಲಿಕ ನಿಷೇಧ
ಶಿವಮೊಗ್ಗ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಾಳೆಬರೆ ಘಾಟ್‌ನಲ್ಲಿ ಮಣ್ಣಿನ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ-ಕುಂದಾಪುರ ರಾಜ್ಯ
ಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳಿಗೆ ತಾತ್ಕಾಲಿಕ ನಿಷೇಧ


ಶಿವಮೊಗ್ಗ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಾಳೆಬರೆ ಘಾಟ್‌ನಲ್ಲಿ ಮಣ್ಣಿನ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್‌ನಲ್ಲಿ 42.10 ರಿಂದ 42.20 ಕಿ.ಮೀ.ವರೆಗೆ ಮಣ್ಣು ಕುಸಿತ ಉಂಟಾಗಿದ್ದು, ಮಳೆಗಾಲ ಮುಗಿಯುವವರೆಗೆ ಮಾಸ್ತಿಕಟ್ಟೆ–ಹೊಸಂಗಡಿ ನಡುವಿನ ಮಾರ್ಗದಲ್ಲಿ ಭಾರಿ ವಾಹನ ಸಂಚಾರಕ್ಕೆ ಅನುಮತಿ ನಿರಾಕರಿಸಲಾಗಿದೆ.

ಭದ್ರತಾ ದೃಷ್ಟಿಯಿಂದ ಪರ್ಯಾಯ ಮಾರ್ಗಗಳಲ್ಲಿ ಸಂಚಾರ ನಡೆಸುವಂತೆ ಸೂಚನೆ ನೀಡಲಾಗಿದೆ. ತಾತ್ಕಾಲಿಕ ದುರಸ್ತಿ ಕೆಲಸ ನಡೆದಿದ್ದು ಮಳೆಯ ಕಾರಣದಿಂದ ಮತ್ತಷ್ಟು ಕುಸಿತದ ಭೀತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande