ಧಾರವಾಡ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : 2024-25ನೇ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯೂಲರ್ ಡಿಸ್ಟ್ರೋಪಿ, ಪಾರ್ಕಿನಸನ್ ಹಾಗೂ ಮಲ್ಟಿಪಲ್ ಸ್ಕೆಲರೊಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ.1000 ಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ, ಬಹುವಿಧ ವಿಕಲತೆ (ಶ್ರವಣದೋಷ ಹಾಗೂ ದೃಷ್ಟಿದೋಷ ಎರಡನ್ನು ಹೊಂದಿರುವವರು) ಹೊಂದಿರುವ ವಿಕಲಚೇತನರಿಗೆ ವಿಸ್ತರಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಆದ್ದರಿಂದ ಆರೈಕೆದಾರರು ಈ ಯೋಜನೆಯಡಿ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಕಾಯಿಲೆ ಪೀಡಿತರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ ಕಡ್ಡಾಯ) ಯನ್ನು ಹೊಂದಿರುವ ಶೇ.75 ಕ್ಕಿಂತ ಹೆಚ್ಚಿನ ವಿಕಲತೆಯನ್ನು ಹೊಂದಿರಿರುವವರು ಅರ್ಜಿ ಸಲ್ಲಿಸಬಹುದು.
ಅರ್ಹರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ತಾಲ್ಲೂಕಾ ಪಂಚಾಯತ ಹಾಗೂ ಗ್ರಾಮ ಪಂಚಾಯತಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa