ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ
ಕೊಪ್ಪಳ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತ
ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ


ಕೊಪ್ಪಳ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು. ಕೊಪ್ಪಳ ಜಿಲ್ಲೆಯಲ್ಲಿ 3ನೇ ಕಂತಿನ ಹಣದ ಒಟ್ಟು ಮೊತ್ತ 48 ಕೋಟಿ 21 ಲಕ್ಷ 38 ಸಾವಿರ ಆಗಿದ್ದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮಾಹಿತಿಗಾಗಿ ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀ ನಿವಾಸ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande