ಗದಗ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ಅವರು ಸರ್ಕಾರಿ ಮತ್ತು ಅನುದಾನಿತ ಶಾಲಾ ಮುಖ್ಯಸ್ಥರೊಂದಿಗೆ ಸ್ವಾತಂತ್ರೊತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಶಾಲಾ ಮಕ್ಕಳನ್ನು ಕರೆತರುವಂತೆ ಸೂಕ್ತ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಎಂ.ಎಚ್.ಕಬ್ಳಿ ಸೇರಿದಂತೆ ಶಾಲಾ ಮುಖ್ಯಸ್ಥರು, ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP