ಒಳ ಮೀಸಲಾತಿ ವರದಿ : ಆ.16 ರಂದು ವಿಶೇಷ ಸಂಪುಟ ಸಭೆ
ಬೆಂಗಳೂರು, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ ನೇತೃತ್ವದ ಒಳ ಮೀಸಲಾತಿ ವರದಿ ಪರಿಶೀಲನೆಗಾಗಿ ಆಗಸ್ಟ್ 16ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಒಳಮೀಸಲಾತಿಗೆ ಸಂಬಂಧಿಸಿದ ನಿರ್ಣಯ ಕೈಗೊಳ್ಳುವ ಕುರಿತು ಚರ್ಚಿಸಲಾಗುವುದು
ಒಳ ಮೀಸಲಾತಿ ವರದಿ : ಆ.16 ರಂದು ವಿಶೇಷ ಸಂಪುಟ ಸಭೆ


ಬೆಂಗಳೂರು, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ ನೇತೃತ್ವದ ಒಳ ಮೀಸಲಾತಿ ವರದಿ ಪರಿಶೀಲನೆಗಾಗಿ ಆಗಸ್ಟ್ 16ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಒಳಮೀಸಲಾತಿಗೆ ಸಂಬಂಧಿಸಿದ ನಿರ್ಣಯ ಕೈಗೊಳ್ಳುವ ಕುರಿತು ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಒಳ ಮೀಸಲಾತಿ ವರದಿಯನ್ನು ಇಂದಿನ ಸಭೆಯಲ್ಲಿ ಮಂಡಿಸಲಾಗಿದ್ದು ಈ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande