ವಿಜಯಪುರ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು https://scholarships.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande