ಡೆತ್‌ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖಸಿ ಕಾರು ಚಾಲಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನೊಬ್ಬ ಡೆತ್‌ನೋಟ್‌ನಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಹೆಸರನ್ನು ಉಲ್ಲೇಖಿಸಿರುವ ಘಟನೆ ನಡೆದಿದೆ. ಬಾಪೂಜಿನಗರದ ನಿವಾಸಿ ಬಾ
Suicide


ಚಿಕ್ಕಬಳ್ಳಾಪುರ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನೊಬ್ಬ ಡೆತ್‌ನೋಟ್‌ನಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಹೆಸರನ್ನು ಉಲ್ಲೇಖಿಸಿರುವ ಘಟನೆ ನಡೆದಿದೆ.

ಬಾಪೂಜಿನಗರದ ನಿವಾಸಿ ಬಾಬು (32) ಎಂಬವರು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಬಾಬು ಜಿಲ್ಲಾ ಪಂಚಾಯತ್ ಸಿಇಒ ಅವರ ಕಾರು ಚಾಲಕನಾಗಿದ್ದ.

ಮೃತರ ಬಳಿಯಿಂದ ಪತ್ತೆಯಾಗಿರುವ ಡೆತ್‌ನೋಟ್‌ನಲ್ಲಿ, “ನನ್ನ ಸಾವಿಗೆ ಸಂಸದ ಡಾ. ಕೆ. ಸುಧಾಕರ್ ಕಾರಣ” ಎಂದು ಬರೆದುಕೊಂಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟುಮಾಡಿದೆ. ಅಲ್ಲದೆ, ಚಿಕ್ಕಕಾಡಿಗಾನಹಳ್ಳಿ ಗ್ರಾಮದ ಸಂಸದರ ಆಪ್ತ ನಾಗೇಶ್ ಎಂಬವರು ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ₹25 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿದ್ದಾರೆ.

ಡೆತ್‌ನೋಟ್‌ನಲ್ಲಿ ಜಿಲ್ಲಾ ಪಂಚಾಯತ್‌ ಲೆಕ್ಕ ಸಹಾಯಕನ ವಿರುದ್ಧವೂ ಗಂಭೀರ ಆರೋಪಗಳನ್ನು ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಡಿಸಿ ಕಚೇರಿ ಆವರಣದಲ್ಲಿ ಆತ್ಮಹತ್ಯೆ ಘಟನೆ ತೀವ್ರವಾಗಿ ನೋವುಂಟುಮಾಡುವ ಸಂಗತಿಯಾಗಿದ್ದು. ಡೆತ್ ನೋಟಿನಲ್ಲಿ ಸಂಸದ ಮತ್ತು ಅವರ ಬೆಂಬಲಿಗರ ಹೆಸರುಗಳು ಉಲ್ಲೇಖವಾಗಿರುವುದು ಗಂಭೀರ ವಿಚಾರವಾಗಿದ್ದು, ಪ್ರಕರಣ ಸಂಬಂಧ ಸಂಪೂರ್ಣವಾಗಿ ಪಾರದರ್ಶಕ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ಘಟನೆ ಸಂಬಂಧಿಸಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಸಂಸದ ಸುಧಾಕರ ಕಾರು ಚಾಲಕ ಡೆತ್‌ನೋಟ್‌ನಲ್ಲಿ ತಮ್ಮ ಹೆಸರು ಬರೆದಿಟ್ಟು ನೇಣಿಗೆ ಶರಣಾದ ಘಟನೆ ನನಗೆ ನೋವು ತಂದಿದೆ. ನನಗೆ ಬಾಬು ಎಂಬ ವ್ಯಕ್ತಿ ಗೊತ್ತಿಲ್ಲ. ನಾನು ಆತನ ಮುಖ ಸಹ ನೋಡಿಲ್ಲ. ಈ ವ್ಯಕ್ತಿ ಯಾಕೆ ನನ್ನ ಹೆಸರು ಉಲ್ಲೇಖ ಮಾಡಿದ್ದಾರೆ ಎಂದು ಗೊತ್ತಿಲ್ಲ, ಈ ಕುರಿತು ಸಮಗ್ರ ತನಿಖೆಯಾಗಲಿ ತಮ್ಮನ್ನು ಒಳಗೊಂಡಂತೆ ಯಾರೇ ತಪ್ಪಿತಸ್ಥರು ಇದ್ದರೂ ಅವರಿಗೆ ಉಗ್ರ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande