ಕುರೇಕುಪ್ಪ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತಂತೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಪಟ್ಟಣದ ಹಲವು ಅಂಗಡಿಗಳ ಮೇಲೆ ಪುರಸಭೆಯ ಅಧಿಕಾರಿ, ಸಿಬ್ಬಂದಿ ಆಕಸ್ಮಿಕ ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ 8 ಕಿ.ಗ್ರಾಂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಪ್ಲಾಸ್ಟಿಕ್ ನಿಷೇಧ ,. ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಅಂಗಡಿ ಮಾಲಿಕರಿಗೆ 1,000 ರೂ ದಂಡ ವಿಧಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಪುರಸಭೆ ಆರೋಗ್ಯ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಕಮ್ಯೂನಿಟಿ ಮೋಬಿಲೈಜರ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್