ಮತ ಕಳ್ಳತನ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ
ನವದೆಹಲಿ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದಿರುವ ಮತ ಕಳ್ಳತನ ಅಕ್ರಮದ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಬಹಿರಂಗ ಪಡಿಸಿರುವ ರಾಹುಲ್ ಗಾಂಧಿ ಕರ್ನಾಟಕದ ಮಹದೇವಪುರ ವ
Rahul


ನವದೆಹಲಿ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದಿರುವ ಮತ ಕಳ್ಳತನ ಅಕ್ರಮದ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಬಹಿರಂಗ ಪಡಿಸಿರುವ ರಾಹುಲ್ ಗಾಂಧಿ ಕರ್ನಾಟಕದ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮಹದೇವಪುರದಲ್ಲಿ 40,009 ನಕಲಿ ವಿಳಾಸದ ಮತದಾರರು ಇರುವ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಇದೇ ರೀತಿ ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದ್ದು, ಮತದಾರರ ಸಂಖ್ಯೆ ಜನಸಂಖ್ಯೆಗಿಂತ ಹೆಚ್ಚಾಗಿದೆ ಎಂದು ಉಲ್ಲೇಖಿಸಿ, ಕಾಂಗ್ರೆಸ್ ಪಕ್ಷದ ತನಿಖಾ ವರದಿ ಹಾಗೂ ದಾಖಲೆಗಳನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಿದ್ದಾರೆ.

ಚುನಾವಣಾ ಆಯೋಗ ಬಿಜೆಪಿ ಜೊತೆ ಕೈಜೋಡಿಸಿರುವುದು ಇದರಿಂದ ಮತ ಕಳ್ಳತನ ಸಾಬೀತಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande