ವಿಜಯಪುರ, 07 ಆಗಸ್ಟ್ (ಹಿ.ಸ.) :
ವಿಜಯಪುರ : ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಒತ್ತಾಯಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎಸ್‌ಸಿಎಸ್‌ಪಿ ಟಿಎಸ್‌ಪಿ 2013 ಕಾಯ್ದೆಯ ಕಾಲಂ 7ಸಿ ಕೂಡಲೇ ರದ್ದುಗೊಳಿಸಬೇಕು. ಅಲ್ಲದೇ, ಸರ್ಕಾರದ 38 ಇಲಾಖೆಯ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಪರಿಶಿಷ್ಟರ ಶೈಕ್ಷಣಿಕ ಅಭಿವೃದ್ಧಿ ಹಾಗೂ ಜನರ ಆರ್ಥಿಕಕ್ಕಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ. ಇದರಿಂದ ಪರಿಶಿಷ್ಟರ ಅಭಿವೃದ್ಧಿ ಕುಂಠಿತ ಆಗುತ್ತಿದೆ. ಅದಕ್ಕಾಗಿ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande