ವಿಜಯಪುರ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳ ಸರ್ಕಾರಿ ನೌಕರರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನವನಗರದ ಕಲಾಭವನದಲ್ಲಿ ಆಗಸ್ಟ್ 9ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ.
ಪತ್ರಿಕಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಗೂ ಗೋಂದಳಿ ಜನಪದ ಹಾಡುಗಾರ ಡಾ. ವೆಂಕಪ್ಪ ಅಂಬಾಜಿ ಸುಗತೇಕರ ಉದ್ಘಾಟಿಸಲಿದ್ದಾರೆ ಎಂದರು.
ಆರ್.ಎ. ಚೇತನ್ ರಾಮ್ ಪ್ರೇರಣಾ ನುಡಿ, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಸಿಇಒ ಶಶೀಧರ್ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್, ಅತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ಗಿರಿಗೌಡ, ಖಜಾಂಚಿ ವಿ.ವಿ. ಶಿವರುದ್ರಯ್ಯ, ಗೌರವಾಧ್ಯಕ್ಷ ಎಸ್. ಬಸವರಾಜು, ಹಿರಿಯ ಉಪಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ, ಎನ್ ನರಸಿಂಹರಾಜು, ಆರ್. ಮೋಹನ್ ಕುಮಾರ್, ಶಂಭುಗೌಡ ಎಸ್. ಆಗಮಿಸಲಿದ್ದು, ವಿಜಯಪುರ ಜಿಲ್ಲಾಧ್ಯಕ್ಷರಾದ ಸುರೇಶ್ ಶೆಡಶ್ಯಾಳ, ರಾಜ್ಯ ಉಪಾಧ್ಯಕ್ಷ ಶಿವಾನಂದ ಮಂಗಾನವರ ಉಪಸ್ಥಿತರಿರುವರು.
ಅಧ್ಯಕ್ಷತೆಯನ್ನು ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ವಹಿಸಲಿದ್ದಾರೆ. ಅವಳಿ ಜಿಲ್ಲೆಗಳಿಂದ 415 ಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಪುರಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಘಕ್ಕೆ 105 ವರ್ಷಗಳ ಇತಿಹಾಸವಿದ್ದು, ರಾಜ್ಯ ಸಂಘವು ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಕೆಲಸವನ್ನು ಮಾಡಿಕೊಂಡು ಬಂದಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾದಿ ಕಾರಿಗಳಾದ ಸಂಜೀವರಡ್ಡಿ ಸತ್ಯರಡ್ಡಿ, ವಿ.ಎಲ್. ವಾಲೀಕಾರ, ಗೋಪಾಲ್ ನೀಲನಾಯಕ, ಎಸ್.ಎಸ್. ಸಾರಂಗಮಠ, ಸುರೇಶ್ ಇಂಜಗನೇರಿ, ಬಿ.ಟಿ. ಕೋವಳ್ಳಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande