ತುಮಕೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ತುಮಕೂರಿನ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ 'ಸೈಬರ್ ಸೆಕ್ಯೂರಿಟಿ ಸಂಶೋಧನಾ ಘಟಕ'ವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸೈಬರ್ ಭದ್ರತೆ ವಿಷಯದ ಬಗ್ಗೆ ಸಂಶೋಧನಾತ್ಮಕವಾಗಿ ಅಧ್ಯಯನ ನಡೆಸಲು, ಸ್ಥಳೀಯವಾಗಿ ಎದುರಾಗುವ ಸೈಬರ್ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ಕೇಂದ್ರ ನೆರವಾಗಲಿದೆ. ಸೈಬರ್ ಹಾವಳಿಯನ್ನು ತಡೆಗಟ್ಟಲು ಅನೇಕ ರೀತಿಯಲ್ಲಿ ಸಂಶೋಧನೆಗಳು ನಡೆಯುತ್ತಿವೆ. ಮುಂಬರುವ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ಕಲಿಯಲು ಸಂಶೋಧನಾ ಕೇಂದ್ರ ಸಹಾಯಕವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಫ್ಲೋರಿಡಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್.ಎಸ್.ಅಯ್ಯಂಗಾರ್, ಸಾಹೇ ವಿವಿ ಉಪಕುಲಪತಿ ಡಾ. ಕೆ.ಬಿ.ಲಿಂಗೇಗೌಡ, ಕುಲಸಚಿವ ಡಾ. ಅಶೋಕ್ ಮೆಹ್ತಾ, ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ.ಎಸ್.ರವಿಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa